ತಾಲೂಕು ಆಡಳಿತ ಸೌಧದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಹುಬ್ಬಳ್ಳಿ, ಆ.15: ತಾಲೂಕು ಆಡಳಿತಸೌಧದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸರಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಿದೆ ಎಂದು ತಹಸೀಲ್ದಾರರಾದ ಪ್ರಕಾಶ ನಾಶಿ ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಂಡು ಕೆಲಸ ನಿರ್ವಹಿಸಬೇಕು. ಸಾರ್ವಜನಿಕರ ಕುಂದು ಕೊರತೆ ಹಾಗೂ ತಾಲೂಕಿನ ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸ್ಪಂದಿಸಬೇಕಾಗಿದೆ ಎಂದರು.
ಶಾಸಕರಾದ ಎನ್.ಎಚ್.ಕೋನರೆಡ್ಡಿ ಮಾತನಾಡಿ, ಜನರ ಸೇವೆ ಮಾಡಲು ಬಂದವರು ನಾವು. ದೇಶದ ಗಡಿ ಕಾಯುವ ಸೈನಿಕರು, ರಾಜ್ಯ ಕಾಪಾಡುವ ಪೆÇಲೀಸರು ಸೇವೆ ಅನನ್ಯವಾದುದು. ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‍ಪೆಕ್ಟರ್ ಮುರುಗೇಶ ಚನ್ನಣ್ಣವರ, ಗ್ರೇಡ್ 2 ತಹಸೀಲ್ದಾರರಾದ ಜಿ.ವಿ.ಪಾಟೀಲ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.