ತಾಲೂಕು ಘೋಷಣೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಿ

ಮುದಗಲ್,ಜು.೦೬-
ನೂತನ ತಾಲೂಕು ಘೋಷಣೆಗೆ ಈ ಭಾಗದ ಜನ ನಾಲ್ಕು ದಶಕಗಳಿಂದ ಕಾಯುತ್ತಿದ್ದಾರೆ. ಮುದಗಲ್ ಹೋಬಳಿ ೧೯೫೨ ರಿಂದ ೨೦೦೮ ರವರೆಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿತ್ತು. ೨೦೦೮ ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ವೇಳೆ ಲಿಂಗಸುಗೂರು ಕ್ಷೇತ್ರಕ್ಕೆ ಸೇರಿಸಲಾಯಿತು. ಈ ಹೋಬಳಿಯವರು ವಿವಿಧ ಕೇತ್ರಗಳನ್ನು ಪ್ರತಿನಿಧಿಸಿ ಗೆದ್ದು ಶಾಸಕರು, ಸಚಿವರಾಗಿದ್ದಾರೆ. ಆದರೆ ಮುದಗಲ್ ತಾಲೂಕು ಕೇಂದ್ರವನ್ನಾಗಿ ಮಾಡಿಸಲು ಯಾರೂ ಮನಸ್ಸು ಮಾಡಿಲ್ಲ.
ಮುದಗಲ್ ಪಟ್ಟಣಕ್ಕೆ ತಾಲೂಕು ಘೋಷಣೆಗೆ ಇರಬೇಕಾದ ಎಲ್ಲ ಅರ್ಹತೆಗಳೂ ಇವೆ. ಭೌಗೋಳಿಕವಾಗಿ ಪಟ್ಟಣ ದೊಡ್ಡದಾಗಿದೆ. ಈಗಾಗಲೇ ಇಲ್ಲಿ ಅನೇಕ ಇಲಾಖೆಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಎಪಿಎಂಸಿ, ಉಪ ತಹಶೀಲ್ದಾರ್, ರೈತ ಸಂಪರ್ಕ ಕೇಂದ್ರ ಹಾಗೂ ಖಜಾನೆ ಇಲಾಖೆ ಕಚೇರಿಗಳು ಇಲ್ಲಿವೆ. ಕೃಷ್ಣಾ ನದಿ ಹತ್ತಿರದಲ್ಲಿದ್ದರೂ ಈ ಹೋಬಳಿ ನೀರಾವರಿಯಿಂದ ವಂಚಿತವಾಗಿದೆ.
ದಶಕದ ಹಿಂದೆ ಹೊಸ ತಲೆಮಾರಿನ ಯುವಜನತೆ ಮತ್ತೆ ತಾಲೂಕು ರಚನೆಗಾಗಿ ನೂತನ ತಾಲೂಕು ರಚನಾ ಹೋರಾಟ ಸಮಿತಿ ರಚಿಸಿ ಹೋರಾಟ ಪ್ರಾರಂಭಿಸಿದ್ದರು. ಇವರ ಹೋರಾಟಕ್ಕೆ , ಮಾಜಿ ಶಾಸಕ ಡಿ.ಎಸ್.ಎಸ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ ಆದರಿಂದ ನಡೆಯುವ ಅಧೀನದಲ್ಲಿ ಮುದಗಲ್ಲ ತಾಲೂಕು ಘೋಷಣೆ ಬಗ್ಗೆ ಸ್ಥಳೀಯ ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ಹಾಗೂ ಕೊಪ್ಪಳದ ಒಐಅ ಶರಣಗೌಡ ಪಾಟೀಲ್ ಬಯ್ಯಾಪುರ ಅಧಿವೇಶನದಲ್ಲಿ ಚಚೆ೯ ಮಾಡಿ ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ರಾದ ಶರಣಪ್ಪ ಕಟ್ಟಿಮನಿ ಹಾಗೂ ದಲಿತ ಸಂಘರ್ಷ ಸಮಿತಿಯ ಮುದಗಲ್ಲ ಘಟಕದ ಅಧ್ಯಕ್ಷ ಬಸವರಾಜ ಬಂಕದಮನೆ ಹಾಗೂ ದಲಿತ ಪರ ಸಂಘಟನೆಗಳು ನಡೆಯುವ ಅಧಿವೇಶನದಲ್ಲಿ ಚಚೆ೯ ಮಾಡಿ ಒತ್ತಾಯ ಮಾಡಿದರು.