
ಕಲಬುರಗಿ,ಸೆ.04:ತಾಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನಾ ಹಾಗೂ ಪುನರ್ವಸತಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಸೋಮವಾರ ಕಲಬುರಗಿ ತಹಶೀಲ್ದಾರ ನಾಗಮ್ಮ ಕಟ್ಟಿಮನಿ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ತಹಸೀಲ್ದಾರರ ಕಚೇರಿಯಲ್ಲಿ ಜರುಗಿತು.
ಈ ಸಭೆಯಲ್ಲಿ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ವಾಜೀದ್ ಪಟೇಲ್, ಹಿರಿಯ ಕಾರ್ಮಿಕ ನಿರೀಕ್ಷಕರುಗಾದ ಕೆ.ಎನ್.ಪ್ರಸನ್ನ, ಕವಿತಾ, ರವೀಂದ್ರಕುಮಾರ, ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ ಯೋಜನಾ ನಿರ್ದೇಶಕ ಸಂತೋμï ಕುಲಕರ್ಣಿ ಸೇರಿದಂತೆ ಸಮಿತಿಯ ವಿವಿಧ ಇಲಾಖೆಗಳ ಸದಸ್ಯರು ಉಪಸ್ಥಿತರಿದ್ದರು.