ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಚಿಂಚೋಳಿ ನ 25: ತಾಲೂಕಿನ ಪೆÇೀಲಕಪಳ್ಳಿಯ ಆದರ್ಶ ವಿದ್ಯಾಲಯದಲ್ಲಿ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಡಾ.ಅವಿನಾಶ ಜಾಧವ, ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಎಲ್ಲಾ ಶಾಲೆಯ ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲಾ ಮಕ್ಕಳು ತಮ್ಮ ತಮ್ಮಲ್ಲಿ ಇರುವ ಪ್ರತಿಭೆಯನ್ನು ಈ ಕಾರ್ಯಕ್ರಮದಲ್ಲಿ ಗುರುತಿಸಿಕೊಳ್ಳಲು ಅವಕಾಶ ನೀಡುವ ಒಳ್ಳೆ ಕಾರ್ಯಕ್ರಮ ಆಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ ಅಂಜುಮ್ ತಬಸ್ಸುಮ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಶೆಟ್ಟ ಭದ್ರಶೆಟ್ಟಿ, ಚಿಂಚೋಳಿಯ ಕ್ಷೇತ್ರ ಸಮನ್ವ ಅಧಿಕಾರಿ ಮಾರುಡಿ ಯಂಗನೂರ, ಆದರ್ಶ ವಿದ್ಯಾಲಯ ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಅವಂಟಿ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ದೇವಿಂದಪ್ಪ ಹೋಳರ, ಖುರ್ಷಿದಮಿಯಾ, ಸುರೇಶ ಕೊರವಿ, ಮಲ್ಲಿಕಾರ್ಜುನ ಪಾಲಾಮೂರ, ಶಾಮರಾವ ಮೋಘಾ, ಸುರೇಶ ದೇಶಪಾಂಡೆ, ಅಮೃತ ಕ0ದಿ, ರಾಜು ಖಡಗದ, ಮತ್ತು ಅನೇಕ ವಿವಿಧ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು