ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕೊರಟಗೆರೆ, ಆ. ೨೯- ಕಸಬಾ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕೊರಟಗೆರೆ ಕಸಬಾ ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟದ ಕ್ರೀಡಾ ಕೂಟದ ಅಥ್ಲೆಟಿಕ್‌ನ ೩ ಸಾವಿರ ವೀಟರ್ ಓಟದ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಸಪ್ತಮಿ, ೧೫೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಹೇಮ, ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸರಿವೆಲಸಂದ್ಯಾ, ತ್ರಿವಿಧ ಜಿಗತದ ಪ್ರೇರಣಾ ಹಾಗೂ ಯೋಗಾಸನ ಮತ್ತು ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕ್ರೀರ್ತಿ ತಂದ ವಿದ್ಯಾರ್ಥಿನಿಯರನ್ನು ಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಹಾಗೂ ಹಿರಿಯ ಶಿಕ್ಷಕ ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕಿ ಉಷಾ ಸೇರಿದಂತೆ ಶಾಲೆಯ ಎಲ್ಲ ಸಹ ಶಿಕ್ಷಕರು,ಶಾಲಾ ಎಸ್.ಡಿ,ಎಂ.ಸಿ ಅಧ್ಯಕ್ಷರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.