ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ: ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ !!

ಸಂಜೆವಾಣಿ ವಾರ್ತೆ
ಚಾಮರಾಜನಗರ, ವೂ.29:- ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ – ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ವಿಜೃಂಭಣೆಯಿಂದಜರುಗಿತು.
ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ – ಮುಸ್ಲಿಂ ಭಾವೈಕ್ಯತೆಗೆ ತಾಳವಾಡಿ ಸಾಕ್ಷಿಯಾಯಿತು.
ಸುಮಾರು 150 ವರ್ಷಗಳಿಂದ ಈ ಕೊಂಡೋತ್ಸವ ನಡೆಯುತ್ತಾ ಬಂದಿದ್ದು, ತಾಳವಾಡಿ ಫಿರ್ಕಾದ 58 ಗ್ರಾಮಗಳು ಸೇರಿದಂತೆ ಚಾಮರಾಜನಗರ, ತಮಿಳುನಾಡಿನ ಈರೋಡ್, ಕೊಯಮತ್ತೂರು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಗ್ರಾಮದ ಮುಖ್ಯ ಬೀದಿಯಲ್ಲಿರುವ ಮಾರಮ್ಮನ ದೇಗುಲದ ಪಕ್ಕ ಮಸೀದಿ ಇದೆ. ಇದರಗೋಡೆಗೆ ಅಂಟಿಕೊಂಡಂತೆ ಟಿಪ್ಪು ಸುಲ್ತಾನ್ ಕಾಲದಲ್ಲಿ ನಿರ್ಮಾಣವಾಗಿರುವ ವೇಣುಗೋಪಾಲ ಸ್ವಾಮಿಗುಡಿ ಇದೆ. ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ಜರುಗುವುದು ಈ ಜಾತ್ರೆಯ ವಿಶೇಷ.
4 ದಶಕದ ಹಿಂದೆಜಾತ್ರೆ ಸಂಬಂಧ ಘರ್ಷಣೆಯಾಗಿತ್ತು. ನಂತರ ಊರಿನ ಎಲ್ಲಾ ಕೋಮಿನ ಮುಖಂಡರು ಕುಳಿತು ಚರ್ಚಿಸಿ ಯಾವುದೇಗಲಾಟೆಗೆ ಅವಕಾಶ ನೀಡದಂತೆ ಸಮಾಜದಲ್ಲಿ ಸಾಮರಸ್ಯ ಕಾಪಾಡುವುದರೊಂದಿಗೆ ಜಾತ್ರಾ ಮಹೋತ್ಸವ ಆಚರಣೆಗೆ ಮುಂದಾಗಿದ್ದರು. ಅಂದಿನಿಂದಲೂ ಸಾಮರಸ್ಯದಿಂದ ಮಸೀದಿ ಮುಂಭಾಗ ಕೊಂಡೋತ್ಸವ ನಡೆದುಕೊಳ್ಳಿ ಬಂದಿದ್ದುದೇವಾಲಯ ಅರ್ಚಕ ಶಿವಣ್ಣ ಗುರುವಾರದಂದುಕೊಂಡ ಹಾಯ್ದರು.