ತಾಳಿಕೋಟೆ ತಾಲೂಕಿಗೆ ಜಿ.ಪಂ ಸಿಇಒ ಭೇಟಿ, ವಿವಿಧ ಕಾಮಗಾರಿಗಳ ಪರಿಶೀಲನೆ

ವಿಜಯಪುರ,ಫೆ.26: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಫೆ.25ರಂದು ತಾಳಿಕೋಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಕೊಣ್ಣೂರ ಗ್ರಾಮದ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಶಾಲಾ ಕಂಪೌಂಡ್, ಪ್ರಗತಿ ಹಂತದಲ್ಲಿರುವ ಅಡುಗೆ ಕೋಣೆ ಮತ್ತು ಹೈಟೆಕ್ ಶೌಚಾಲಯ ಕಾಮಗಾರಿ ವೀಕ್ಷಣೆ ಮಾಡಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ, ಕುಡಿಯುವ ನೀರು, ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಬಳಿಕ ಕೊಣ್ಣೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಐತಿಹಾಸಿಕ ಕಲ್ಯಾಣಿ ಕಾಮಗಾರಿ ಪರಿಶೀಲನೆ ನಡೆಸಿದರು.
ಪಡೆಕನೂರ ಗ್ರಾಮಕ್ಕೆ ಭೇಟಿ ನೀಡಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಿರ್ಮಾಣವಾದ ಸಮುದಾಯ ಶೌಚಾಲಯ, ಸ್ವಚ್ಛ ಭಾರತ ಮಿಷನ್ ಯೋಜನೆ ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯಡಿ ನಿರ್ಮಾಣವಾದ ಬೂದು ನೀರು ನಿರ್ವಹಣಾ ಕಾಮಗಾರಿ ಪರಿಶೀಲಿಸಿದರು. ಸಮರ್ಪಕವಾಗಿ ನಿರ್ವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಳಿಕೋಟೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ವಾಚಾರಣೆಗಾಗಿ ಸೂಚಿಸಿದರು.
ಬೊಮ್ಮನಹಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯಡಿ ನಿರ್ಮಾಣ ಮಾಡಿದ ಎರಡು ಅಂಗನವಾಡಿ ಕೇಂದ್ರ ವೀಕ್ಷಿಸಿ, ಶೀಘ್ರದಲ್ಲೇ ಅಂಗನವಾಡಿ ಕೇಂದ್ರಗಳನ್ನು ಆರಂಭಿಸುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆÉ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಆರ್. ಬಿರಾದಾರ, ಕೊಣ್ಣೂರ ಗ್ರಾ.ಪಂ ಅಧ್ಯಕ್ಷೆ ರೇಣುಕಾ ಮಾದರ, ಸಹಾಯಕ ನಿರ್ದೇಶಕಿ ಸುಜಾತ ಯಡ್ರಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರÀ ಆರ್.ಎಸ್. ಹಿರೇಗೌಡ್ರ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರÀ ಶಿವರಾಜ ನಾಯಕ, ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಅಶೋಕ ಚವ್ಹಾಣ, ಕೊಣ್ಣೂರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಾವಿತ್ರಿ ಬಿರಾದಾರ, ಬೊಮ್ಮನಹಳ್ಳಿ ಹಾಗೂ ಇತರರಿದ್ದರು.