ತಾ.ಪಂ. ಇಒಗೆ ಅಭಿನಂದನೆ

ಕೋಲಾರ,ಆ.೬: ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿಯಪ್ಪನವರ ಧಕ್ಷ ಮತ್ತು ಪ್ರಾಮಾಣಿಕ ಸೇವೆಯನ್ನು ಶ್ಲಾಘಿಸಿ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ವತಿಯಿಂದ ಹೂಗುಚ್ಚ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಂಜಿತ್ ಬಿಎಮ್. ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ ರವೀಂದ್ರ, ರಾಜ್ಯ ಗೌರವಾಧ್ಯಕ್ಷರು ವಿಶ್ವನಾಥ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುನೀತ್ ಹಾಗೂ ಕೋಲಾರ ಜಿಲ್ಲಾಧ್ಯಕ್ಷ ಸೋಮಶೇಖರ್ ವೈವಿ ಮತ್ತಿತರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.