ತಿನಿಸುಗಳ ಮಾರಾಟ ಮನರಂಜನೆಯ ಸುರಿಮಳೆ

ಕೋಲಾರ, ಜು.೨೭: ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಬೇಕು, ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವ್ಯಕ್ತಿತ್ವ ವಿಕಸನದ ಕಾರ್ಯಕ್ರಮಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಳ್ಳಬೇಕೆಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ನಗರದ ಹೊರವಲಯದಲ್ಲಿರುವ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸೇಲ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಗುರಿ ಸಾಧನೆಗೆ ಇಂತಹ ಕಾರ್ಯಕ್ರಮಗಳು ಮೊದಲ ಮೆಟ್ಟಿಲಾಗಿದೆ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸಲು ಸಹಕಾರಿಯಾಗುತ್ತದೆ, ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ ಆತ್ಮವಿಶ್ವಾಸ ಸಾಧಿಸುವ ಛಲವನ್ನು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ, ವಿದ್ಯಾರ್ಥಿಗಳು ಸದಾ ಜೀವನದಲ್ಲಿ ಏನೇ ಬರಲಿ ಸಾಧಿಸಬಲ್ಲೆ ಎಂಬ ಆತ್ಮವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧನೆ ಮಾಡಬಹುದೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಎಂ.ಉದಯ್ ಕುಮಾರ್, ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ವಿ.ಕೃಷ್ಣಪ್ಪ, ಉಪಾಧ್ಯಕ್ಷ ಮಾರುತಿ ಸಿಂಗ್ರಿ, ಕಾರ್ಯದರ್ಶಿ ಜಿ.ಎ. ಕುಲಕರ್ಣಿ, ಪದವಿ ಕಾಲೇಜಿನ ಪ್ರಾಂಶುಪಾಲ ಪೊ?ರ. ಎಂ.ಕೃಷ್ಣಪ್ಪ, ಉಪ ಪ್ರಾಂಶುಪಾಲ ಬದ್ರಿನಾಥ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಹಾಜರಿದ್ದರು.