ತಿರುಪತಿಯಲ್ಲಿ ಆದಿಪುರಷ್ ಫ್ರೀ ರಿಲೀಸ್

ಹೈದರಾಬಾದ್,ಜೂ.೭-ಟಾಲಿವುಡ್ ನಟ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ ಆದಿಪುರಷ ಫ್ರೀ ರಿಲೀಸ್ ಕಾರ್ಯಕ್ರಮ ಆಂಧ್ರಪ್ರದೇಶದ ತಿರುಪತಿಯಲ್ಲಿ ಅದ್ಧೂರಿಯಾಗಿ ನೇರವೇರಿದೆ. ಪೌರಾಣಿಕ ಪಾತ್ರಗಳನ್ನೊಳಗೊಂಡ ಆದಿ ಪುರುಷ ಚಿತ್ರದ ಮೇಲೆ ಪ್ರೇಕ್ಷಕ ಪ್ರಭುಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಆದಿಪುರುಷ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಮೊದಲು ಆದಿಪುರುಷ್ ಚಿತ್ರದ ಟೀಸರ್ ರಿಲೀಸ್ ಆದಾಗ ಕೆಲವರಿಂದ ಟೀಕೆಗಳು ಬಂದಿದ್ದವು. ಆದರೆ ಇದೀಗ ಟ್ರೈಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿನ್ನೆ ತಿರುಪತಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎಲ್ಲರೂ ಪ್ರಭಾಸ್ ನಟನೆಯನ್ನು ಹಾಡಿ ಹೊಗಳಿದ್ದಾರೆ. s
ಇದೇ ತಿಂಗಳ ೧೬ ರಂದು ಸಿನಿಮಾ ವಿಶ್ವದಾದ್ಯಂತ ಅಬ್ಬರಿಸಲಿದೆ. ಸಿನಿಮಾ ತಂಡ ಕೂಡ ಎಲ್ಲೆಡೆ ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ ವಿಭಿನ್ನವಾಗಿ ಕಾಣಿಸಿಕೊಳ್ಳುವ ಮೂಲಕ ಪ್ರೇಕ್ಷಕರಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.