ತಿ.ನರಸೀಪುರ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ:‌ಸಿಎಂ

ಬೆಂಗಳೂರು, ಮೇ 29: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆಯಾಗಿರುವ ಅಪಘಾತದಲ್ಲಿ ಮೃತಪಟ್ಟಿರುವ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ‌

ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಬಿಜೆಪಿ ಒತ್ತಾಯಿಸಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ನರೇಂದ್ರ ಮೋದಿಯವರು 15 ಲಕ್ಷ ನೀಡುವುದಾಗಿ, 2 ಕೋಟಿ ಹುದ್ದೆಗಳನ್ನು ಸೃಷ್ಟಿ ಮಾಡುವುದಾಗಿ, ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು ಮಾಡಿದರೇ? ಅಚ್ಛೆ ದಿನಗಳನ್ನು ತಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಅಶೋಕ್ ಅವರು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅಶೋಕ್ ಅವರಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.