ತೀವ್ರತರ ಅತೀಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ:ಅ.02 :ಕಲಬುರಗಿ ಜಗತ್ ಶ್ರೀಮತಿ ರಮಾಬಾಯಿ ಅಂಬೇಡ್ಕರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ಜಿಲ್ಲೆಯ ಮಕ್ಕಳಲ್ಲಿ ತೀವ್ರತರ ಅತೀಸಾರ ಭೇದಿ ನಿಯಂತ್ರಣ ಕುರಿತು ಅರಿವು ಮೂಡಿಸುವ (2022ರ ಆಗಸ್ಟ್ 1 ರಿಂದ 15 ರವರೆಗೆ) ಪಾಕ್ಷಿಕ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ ಅವರು ಸೋಮವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ರಾಜ್ಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು 2014-15 ನೇ ಸಾಲಿನಿಂದ “ತೀವ್ರತರ ಅತಿಸಾರ ಭೇದಿಯಿಂದ ಶೂನ್ಯ ಮಕ್ಕಳ ಮರಣ” ಎಂಬ ಧೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಗ್ರಾಮ ಆರೋಗ್ಯ ಮತ್ತು ಪೌಷ್ಟಿಕ ಆಹಾರ ದಿನಾಚರಣೆ ಹಾಗೂ ಅತೀಸಾರ ಭೇದಿ ನಿಯಂತ್ರಣ, ಪರಿಸರ ನೈರ್ಮಲ್ಯ, ಕೈ ತೊಳೆಯುವ ವಿಧಾನಗಳನ್ನು ಪ್ರಾತ್ಯಕ್ಷೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಇದಲ್ಲದೇ 0-5 ವರ್ಷದ ಮಕ್ಕಳಿಗೆ ಅತಿಸಾರ, ವಾಂತಿ ಹಾಗೂ ಭೇದಿಯಾದಾಗ ತಾಯಿಯು ಮಗುವನ್ನು ಯಾವ ರೀತಿಯಲ್ಲಿ ಆರೈಕೆ ಮಾಡಬೇಕು. ಓಆರ್‍ಎಸ್ ಹೇಗೆ ತಯಾರಿಸಬೇಕು ಹಾಗೂ ಝಿಂಕ್ ಮಾತ್ರೆಯನ್ನು ಹೇಗೆ ಬಳಸಬೇಕೆಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ. ಪ್ರಭುಲಿಂಗ ಮಾನಕರ ಅವರು ಈ ಪಾಕ್ಷಿಕ ಕಾರ್ಯಕ್ರಮದ ಉದ್ದೇಶ ಹಾಗೂ ಗುರಿ ಕುರಿತು ಮಾಹಿತಿ ನೀಡಿದರು.
ಕಲಬುರಗಿಯ ಶ್ರೀಮತಿ ರಮಾಬಾಯಿ ಅಂಬೇಡ್ಕರ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗಭೂಷಣ ಅವರು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಕೆಯ ಮೂಲಕ ಕೈತೊಳೆಯುವ ವೈಜ್ಞಾನಿಕ ವಿಧಾನ ಹಾಗೂ ಸ್ವಚ್ಛತೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜಕುಮಾರ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಸುರೇಶ ಮೇಕಿನ್, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಮಾರುತಿ ಕಾಂಬಳೆ, ವೈದ್ಯಾಧಿಕಾರಿ ಡಾ. ಮಾಲ್ಲಾರಾವ ಮಲ್ಲೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.