ತುಂಗಭದ್ರಾ ಪುಷ್ಕರ ರದ್ದು

ಗಂಗಾವತಿ ನ.19: ತುಂಗಭದ್ರಾ ಪುಷ್ಕರ ಮಹೋತ್ಸವ ಕಾರ್ಯಕ್ರಮ ರದ್ದುಪಡಿಸಿದ್ದೇವೆ ಎಂದು ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘ ಅಧ್ಯಕ್ಷ ಜಿ.ರಾಮಕೃಷ್ಣ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನ.20 ರಿಂದ ಡಿ.1 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಪುಷ್ಕರ ಮಹೋತ್ಸವವನ್ನು ನೆರವೇರಿಸಲು ನಮ್ಮ ಸಂಘದಿಂದ ತೀರ್ಮಾನಿಸಲಾಗಿತ್ತು.
ಜಿಲ್ಲಾಧಿಕಾರಿ ಇವರು, ಜಿಲ್ಲೆಯಲ್ಲಿ ಕೊವಿಡ್-19 ಸೋಂಕ ತಡೆಗಟ್ಟಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಸಾವಿರಾರು ಜನರು ಸೇರಿ ನದಿಯಲ್ಲಿ ಸ್ನಾನ ಮಾಡುವುದರಿಂದ ಕೊವಿಡ್-19 ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುಂಗಭದ್ರಾ ನದಿ ಪುಷ್ಕರ ಮಹೋತ್ಸವವನ್ನು ನಡೆಸಲು ಅನುಮತಿ ನೀಡಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದ್ದರಿಂದ ತುಂಗಭದ್ರಾ ನದಿ ಪುಷ್ಕರ ತುಂಗಭದ್ರಾ ಮಹೋತ್ಸವದ ನಿರ್ಧಾರವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ರದ್ದುಪಡಿಸಿದ್ದೇವೆ ಎಂದು ಜಿ.ರಾಮಕೃಷ್ಣ ಅವರು ತಿಳಿಸಿದ್ದಾರೆ.