ತುಂಗಭದ್ರ ಎಡದಂಡೆ ಕಾಲುವೆ – ನೀರಿನ ಪ್ರಮಾಣ ಕುಸಿತ

ರಾಯಚೂರು,ಮಾ.೦೩- ತುಂಗಭದ್ರ ಎಡದಂಡೆ ಕಾಲುವೆಯ ಮೈಲ್ ೬೯ ರಿಂದ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಮಾನ್ವಿ, ಸಿರವಾರ ಹಾಗೂ ರಾಯಚೂರು ತಾಲೂಕಿನ ಕೆಳಭಾಗದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.
ಬೆಳೆದು ನಿಂತಿರುವ ಬೆಳೆಗಳಿಗೆ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲ ಎಂದು ತಿಳಿಸಿ ವಾಸ್ತವಾಂಶದ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಅವರೊಂದಿಗೆ ಎಐಸಿಸಿ ಕಾರ್ಯದರ್ಶಿಗಳಾದ ಎನ್‌ಎಸ್ ಬೋಸರಾಜು ಅವರು ಚರ್ಚಿಸಿದರು.
ತುಂಗಭದ್ರ ಎಡದಂಡೆ ಕಾಲುವೆ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಕಛೇರಿಯಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನೇತೃತ್ವದಲ್ಲಿ ನೀರಾವರಿ ಇಲಾಖೆಯ ಚೀಪ್ ಇಂಜಿನಿಯರ್, ಹಾಗೂ ನೀರಾವರಿ ಅಧಿಕಾರಿಗಳ ಜೊತೆ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸರಿಯಾದ ಪ್ರಮಾಣದಲ್ಲಿ ನೀರು ಬಿಡದಿರುವದರಿಂದ ರೈತರು ಕಂಗಾಲಾಗಿದ್ದಾರೆ. ಸಮರ್ಪಕ ನೀರು ಸರಬರಾಜುಗಾಗಿ ಹೋರಾಟ ಮಾಡಿ ಅಧಿಕಾರಿಗಳಿಗೆ ರೈತರ ಸಂಕಷ್ಟ ಮನವರಿಕೆ ಮಾಡಲಾಗಿದೆ ಆದರೂ ಈ ರೀತಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದು ಖಂಡನೀಯವಾಗದೆ ಎಂದರು.
ಈ ಸಂದರ್ಭದಲ್ಲಿ ಮಾನ್ವಿ ಮಾಜಿ ಶಾಸಕರು ಹಂಪಯ್ಯ ಸಾಹುಕಾರ್, ರೈತ ಸಂಘದ ರಾಜ್ಯಾಧ್ಯಕ್ಷರು ಚಾಮರಾಜ ಪಾಟೀಲ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕೆ. ಶಾಂತಪ್ಪ, ಹಾಗೂ ರೈತ ಸಂಘದ ಸದಸ್ಯರು ಸೇರಿದಂತೆ ಇತರ ರೈತ ಮುಖಂಡರು ಇದ್ದರು.