ತುಮಕೂರಲ್ಲಿ ವಿದ್ಯಾರ್ಥಿ ಸಮ್ಮೇಳನ


(ಸಂಜೆವಾಣಿ ಪ್ರತಿನಿಧಿಯಿಂದ)
ದಾವಣಗೆರೆ. ಆ.೧೭; ಎಐಡಿಎಸ್ ಓ ಸಂಘಟನೆಯಿಂದ ಸೆಪ್ಟೆಂಬರ್ ೧,೨ ಹಾಗೂ ೩ ರಂದು ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಮಿತಿಯ ಮಹಾಂತೇಶ್ ಬೀಳೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಾದ್ಯಂತ ಕಳೆದ ವರ್ಷ ಸಾರ್ವಜನಿಕ ಶಿಕ್ಷಣ ಉಳಿಸಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು. ಈ ಆಂದೋಲನದಲ್ಲಿ ೩೫ ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಮಾಡಿದ್ದೆವು ಈ ಆಂದೋಲನವು ದೊಡ್ಡ ಪ್ರಭಾವ ಬೀರಿದ್ದು ನೂರಾರು ಶಿಕ್ಷಕರು,ಪ್ರಾಂಶುಪಾಲರು,ಪೋಷಕರು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.ಇದೀಗ ತುಮಕೂರಿನಲ್ಲಿ ಈ ಬಾರಿಯ ಸಮ್ಮೇಳನ ಆಯೋಜಿಸಲಾಗಿದೆ ಈ ಮೂಲಕ ಶೈಕ್ಷಣಿಕ ಸಮಸ್ಯೆಗಳ ವಿರುದ್ದ ಪ್ರಬಲ ಸಂಘಟಿತ ಹೋರಾಟಗಳನ್ನು ಬೆಳೆಸುವ ಸಂಕಲ್ಪ ನಮ್ಮದು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಪಠ್ಯಕ್ರಮದ ಮೂಲಕ ಶಿಕ್ಷಣಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣ ರಕ್ಷಿಸಬೇಕು.ಎನ್ ಇಪಿ ಹೇರಿಕೆ ಕೈಬಿಡಬೇಕು.ಖಾಲಿಯಿರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಬೇಕು.ಅತಿಥಿ ಶಿಕ್ಷಕರ ಹಕ್ಕು ರಕ್ಷಿಸಬೇಕು.ಬಜೆಟ್ ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ ನೀಡಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.