ತುಮಕೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ

ತುಮಕೂರಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಿವೃತ್ತ ಪೊಲೀಸ್ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಪೊಲೀಸ್ ಉಪಾಧೀಕ್ಷಕ ವೆಂಕಟಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ, ಅಡಿಷನಲ್ ಎಸ್ಪಿ ಉದೇಶ್ ಮತ್ತಿತರರು ಭಾಗವಹಿಸಿದ್ದರು