ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ


ಚಿತ್ರದುರ್ಗ.ಏ.೨೧; ತಾಲ್ಲೂಕಿನ ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಮಂಗಳವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಕೆ. ನಂದಿನಿ ದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಔಷಧ ಕೊಠಡಿ ವೀಕ್ಷಣೆ ಮಾಡಿದರು. ನಂತರ ಗಂಟಲು, ನಾಸಿಕ ದ್ರವ ಸಂಗ್ರಹಣಾ ವಿಭಾಗಕ್ಕೆ ಭೇಟಿ ನೀಡಿ ರೋಗ ಲಕ್ಷಣವಿರುವ ಪ್ರಕರಣಗಳ ತಪಾಸಣೆ ಮಾಡಲು ಸೂಚನೆ ನೀಡಿದರು.
ಲಸಿಕಾ ಪ್ರಗತಿ ಪರಿಶೀಲನೆ ನಡೆಸಿ, ಹೆಚ್ಚು ಜನರು ಲಸಿಕೆ ಪಡೆಯಲು ಸಾರ್ವಜನಿಕರಿಗೆ ಟಾಂ ಟಾಂ ಮಾಡಿಸುವ ಮೂಲಕ ಮಾಹಿತಿ ಒದಗಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.
ಫೋಟೋ ವಿವರ: ಚಿತ್ರದುರ್ಗ ತಾಲ್ಲೂಕಿನ ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ. ನಂದಿನಿದೇವಿ ಭೇಟಿ ನೀಡಿ ಕೋವಿಡ್ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.