ತೆರೆಗೆ ಬರಲು ಸಜ್ಜಾದ ಕಚೋರಿ

ರುಚಿಕರ ಖಾದ್ಯ “ಕಚೋರಿ” ಈಗ ಅದೇ ಹೆಸರಲ್ಲಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಾಯಕ, ನಿರ್ದೇಶಕ, ನಿರ್ಮಾಪಕ ಆರ್ಯನ್ ಮಾತನಾಡಿ ಕೋವಿಡ್ ಸಮಯದಲ್ಲಿ ಆರಂಭವಾದ ಚಿತ್ರಕ್ಕೆ ರಮೇಶ್, ಮಂಜುನಾಥ್, ಖಾಜಾಹುಲಿ ಸಹಕಾರ ನೀಡಿದ್ದಾರೆ.ಕಚೋರಿ ಮಾರುವ ಹುಡುಗ, ಶ್ರೀಮಂತ ಹುಡುಗಿಯನ್ನು ಲವ್ ಮಾಡುತ್ತಾನೆ. ಆನಂತರ ಬ್ರೇಕಪ್ ಆಗುತ್ತೆ, ಏಕೆ ಬ್ರೇಕಪ್ ಆಯ್ತು, ಅದಕ್ಕೆ ಕಾರಣ ಏನು ಎನ್ನುವುದ ಚಿತ್ರದ ತಿರುಳು ಎಂದರು.

ಗಂಗಾವತಿ ಸುತ್ತಮುತ್ತ ಟಾಕಿ ಭಾಗದ ಚಿತ್ರೀಕರಣ ಮಾಡಲಾಗಿದೆ.  ವಿಜಯ ಪ್ರಕಾಶ್ ಹಾಡಿದ ಡ್ಯುಯೆಟ್ ಸಾಂಗ್ ಮನಾಲಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಕೆಂಪೇಗೌಡ, ಮೋಹನ್ ಜುನೇಜಾ ಕಾಮಿಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀ ಕುಟುಂಬ ಕುಳಿತು ನೋಡುವ ಸಿನಿಮಾ ಎಂದರು.

ನಾಯಕಿ ಇಳಾವಿಟ್ಲಾ ಮಾತನಾಡಿ ನಾಯಕಿಯಾಗಿ ಇದು ನನ್ನ 3ನೇ ಚಿತ್ರ. ಕಾಲೇಜ್ ಯುವತಿ ನಂತರ ರಾಜಕಾರಣಿಯಾಗಿ ಎರಡು  ಶೇಡ್ ನಲ್ಲಿ ಕಾಣಿಸಿಕೊಂಡಿದ್ದೇನೆ  ಯಾಕೆ ಅವಳು ಈಥರ ಮಾಡ್ತಾಳೆ ಅನ್ನೋದನ್ನು ಕಂಡುಹಿಡಿಯುವುದೇ ಚಿತ್ರದ ಎಳೆ ಎಂದರು.

ಹಿರಿಯ ನಟ ಕೀರ್ತಿರಾಜ್ ಮಾತನಾಡಿ ಡಾನ್ ಆಗಿ ಕಾಣಿಸಿಕೊಂಡಿದ್ದೇನೆ. ಜೀವನದಲ್ಲಿ ನೊಂದ ನಾಯಕ, ನನ್ನ ಆಶ್ರಯಕ್ಕೆ ಬಂದು ಅಲ್ಲಿ ಹೇಗೆ ಬೆಳೆಯುತ್ತಾನೆಂಬುದೇ ಕಥೆ ಎಂದರು.

ಕೆಂಪೇಗೌಡ ಮಾತನಾಡಿ ನಾಯಕನ  ಲವ್‍ಗೆ ಬೆಂಬಲ ನೀಡುವ ಗೆಳೆಯನ ಪಾತ್ರ ಮಾಡಿದ್ದೇನೆ ಎಂದರೆ ಗಂಗಾವತಿಯ ಖಾಜಾಹುಲಿ, ಮಂಜುನಾಥ್, ದೊಡ್ಡ ಬಸವರಾಜ್  ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.ನಟ ಧರ್ಮ ಕೀರ್ತಿರಾಜ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಗೀತ ನಿರ್ದೇಶಕ ಕೃಪಾಕರ್ ಮಾತನಾಡಿ ಕಚೋರಿಯಷ್ಟೇ ಚೆನ್ನಾಗಿದೆ.ಚಿತ್ರದಲ್ಲಿ 2 ಡ್ಯುಯೆಡ್, ಐಟಂ, ಟೀಸಿಂಗ್, ಫೀಲಿಂಗ್ ಸೇರಿ 5 ವೆರೈಟಿ ಹಾಡುಗಳಿವೆ ಎಂದರು.