ತೆರೆದ ಗುಂಡಿಗೆ‌ ಬಿದ್ದು ಐವರ ಸಾವು; ಯುಪಿ ಸರ್ಕಾರಕ್ಕೆ ಎನ್ಎಚ್ಆರ್ಸಿ ನೋಟೀಸ್

ನವದೆಹಲಿ, ಮಾ.18-ಉತ್ತರ ಪ್ರದೇಶದ ಆಗ್ರಾದಲ್ಲಿ ತೆರೆದ ಗುಂಡಿಗೆ ಬಿದ್ದು, ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಸಮಗ್ರ ವರದಿಯನ್ನು ನೀಡುವ ಜೊತೆಗೆ ಈ ರೀತಿಯ ತೆರೆದ ಗುಂಡಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದೆ ಎನ್ನುವ ಕುರಿತಂತೆಯೂ ವಿವರ ನೀಡುವಂತೆ ಆಯೋಗ ಸೂಚಿಸಿದೆ.

ತೆರೆದ ಗುಂಡಿಗೆ ಐವರು ಬಿದ್ದು, ಪ್ರಾಣ ಕಳೆದುಕೊಳ್ಳುವ ಪ್ರಕರಣದ ಹಿಂದೆ ಮನೆಯ ಮಾಲೀಕನ ಉದಾಸೀನತೆ ಮೇಲ್ನೋಟಕ್ಕೆ ಕಂಡು ಬಂದಿದೆ ಅವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ ಎನ್ನುವುದನ್ನು ತಿಳಿಸುವಂತೆ ಹೇಳಿದೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಮುಂದೆ ಈ ರೀತಿಯ ಘಟನೆಗಳು ಆಗದಂತೆಯೂ ಎಚ್ಚರಿಕೆ ವಹಿಸಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

ತೆರೆದ ಗುಂಡಿಗೆ ಬಿದ್ದು ಐವರು ಸಾವನ್ನಪ್ಪಿದ ಪ್ರಧಾನ ಸಮಾಜದಲ್ಲಿ ಮನೆಯ ಮಾಲಿಕನ ಬೇಜವಾಬ್ದಾರಿ ಮತ್ತು ನಿರ್ಲಕ್ಷವೇ ಕಾರಣ ಎನ್ನುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪ್ರಕರಣ ಸಂಬಂಧ ಸಮಗ್ರ ವರದಿಯನ್ನು ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ತಿಳಿಸಿದೆ