ತೆಲಂಗಾಣ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿ ಭಟನೆ

ಹೈದ್ರಾಬಾದ್ ಡಿಸೆಂಬರ್ ೨೩. ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳನ್ನು ರಾಜ್ಯ ಸರ್ಕಾರ ದುರ್ಬಲ ಗೊಳಿಸುತ್ತಿದೆ ಎಂದು ಎಂದು ಆರೋಪಿಸಿರುವ ತೆಲಂಗಾಣ ಕಾಂಗ್ರೆಸ್ , ರಾಜ್ಯಸರ್ಕಾರದ ಈ ಧೋರಣೆಯನ್ನು ಖಂಡಿಸಿ ದಿನದಮಟ್ಟಿಗೆ ಸತ್ಯಾಗ್ರಹ ದೀಕ್ಷಾ ಎಂಬ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ತೆಲಂಗಾಣ ರಾಷ್ಟ್ರೀಯ ಸಮಿತಿ ಸರ್ಕಾರ , ಪಂಚಾಯತ್ ರಾಜ್ ಸಂಸ್ಥೆಗಳನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡುತ್ತಿದೆ ಹಾಗೂ ಅವುಗಳನ್ನು ದುರ್ಬಲಗೊಳಿಸುತ್ತದೆ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉತ್ತಮ್ ಕುಮಾರ್ ಆರೋಪಿಸಿದ್ದಾರೆ.
ಸಂಸತ್ ಸದಸ್ಯರೂ ಆಗಿರುವ ರೆಡ್ಡಿ ಅವರ ನೇತೃತ್ವದಲ್ಲಿ ನಿನ್ನೆ ಒಂದು ದಿನದ ಸತ್ಯಾಗ್ರಹ ದೀಕ್ಷಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತರಾಗಿರುವ ಕಾಂಗ್ರೆಸ್ ಸದಸ್ಯರ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿರುವುದು ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಮ್ಮ ಹೋರಾಟ ಮುಂದುವರಿಯಲಿದೆ. ಚುನಾಯಿತ ಸದಸ್ಯರನ್ನು ಕಡೆಗಣಿಸ ನಾಗುತ್ತಿರುವ ಸರ್ಕಾರದ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿರುವ ಪ್ರತಿನಿಧಿಗಳ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡಬಾರದು ಎಂದು ಸರ್ಕಾರದ ಗಮನ ಸೆಳೆಯುವುದು ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಮುಖಂಡ ಪೊನ್ನಂ ಪ್ರಭಾಕರ್ ಅವರು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ದಿನನಿತ್ಯದ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂದು ಅವರು ಹೇಳಿದ್ದು ಸರ್ಕಾರ ಇದೇ ರೀತಿ ಧೋರಣೆಯನ್ನು ಮುಂದುವರಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.