ತೈಲ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ

ಕೊಟ್ಟೂರು ಜೂ 11: ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಹಂಡ್ರೆಡ್ ನಾಟ್ ಔಟ್ ಕಾರ್ಯಕ್ರಮವನ್ನು ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಂ.ಜಿ. ಮಲ್ಲಿಕಾರ್ಜುನ್ ಚಾಲನೆ ನೀಡಿದರು
ಮಾತನಾಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಾರ್ವಜನಿಕರಿಂದ ಕೋವಿಡ್ ಸಮಯದಲ್ಲಿ ತೈಲ ಬೆಲೆ ಏರಿಸುವ ಮೂಲಕ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ. ಎಂ.ಜಿ .
ಮಲ್ಲಿಕಾರ್ಜುನ್, ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಪಿ .ಇಂದ್ರಜಿತ್,ಹ್ಯಾಳ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಎಚ್ .ರಾಘವೇಂದ್ರ, ಸೇರಿದಂತೆ ಅನೇಕ ರಿದ್ದರು