ತೈಲ ಬೆಲೆ ಹೆಚ್ಚಳ ವಿರೋಧಿಸಿ ಝೂಮ್ ಸಭೆ

ಬೀದರ:ಜೂ.11: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ತೈಲ ಬೆಲೆ ಹೆಚ್ಚಿಸುತ್ತಿದೆ ಎಂದು ವಿರೋಧಿಸಲು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಝೂಮ್ ಆಧಾರಿತ ಸಭೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಅಶೋಕ ಖೇಣಿ ಭಾಗವಹಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯP ಸಿದ್ದರಾಮಯ್ಯ ಅವರು ಹಮ್ಮಿಕೊಂಡಿದ್ದ ಸಭೆಯಲ್ಲಿ ಖೇಣಿ ಭಾಗಿಯಾದರು.

ಕಳೆದ ಒಂದು ವರ್ಷದಲ್ಲಿ ಬಿಜೆಪಿ ಸರ್ಕಾರ 48 ಬಾರಿ ತೈಲ ದರ ಹೆಚ್ಚಳ ಮಾಡಿದೆ. ಕಳೆದ ಜನವರಿಯಲ್ಲಿ 10 ಬಾರಿ, ಫೆಬ್ರವರಿಯಲ್ಲಿ 16 ಬಾರಿ, ಮೇ ತಿಂಗಳಲ್ಲೂ 16 ಬಾರಿ, ಜೂನ್ ತಿಂಗಳಲ್ಲಿ ಕೇವಲ 9 ದಿನಗಳಲ್ಲಿ 6 ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ. ಇದರ ವಿರುದ್ದ ರಾಜ್ಯಾದ್ಯಂತ 5 ದಿನಗಳ ಕಾಲ ನಡೆಯಲಿರುವ 100 ನಾಟ್ ಔಟ್’ ಅಭಿಯಾನದ ಪ್ರತಿಭಟನೆಯ ಪೂರ್ವ ಸಿದ್ದತಾ ಸಭೆ ಇದಾಗಿದೆ ಎಂದು ಖೇಣಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳುವ ಈ ಅಭಿಯಾನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಖೇಣಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.