ತೈಸಿನ್ ರಜಾ-ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ರಾಯಚೂರು.ನ.೦೩-ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಬಿ.ಆರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ನಾಲ್ಕನೆಯ ಸೆಮಿಸರ್ ವಿದ್ಯಾರ್ಥಿಯಾದ ತೈಸಿನ್ ರಜಾ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಅಧಿಕಾರಿಗಳ ಕಾರ್ಯಲಯ ರಾಯಚೂರು ಇವರು ಏರ್ಪಡಿಸಿದ್ದರು. “ಹೆಚ್.ಐ,ವಿ. ನಿಯಂತ್ರಣ ಮಾಡುವಲ್ಲಿ ಯುವಕರ ಪಾತ್ರ” ಎಂಬ ವಿಷಯದ ಕುರಿತು ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ವಿವಿಧ ೧೯ ಕಾಲೇಜಿನ ಮೂವತ್ತೆಂಟು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಯ ಈ ಸಾಧನೆಗೆ ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಾರಸಮಲ್ ಸುಖಾಣಿಯವರು, ಪ್ರಧಾನ ಕಾರ್ಯದರ್ಶಿಗಳಾದ ನಂದಾಪುರ ಶ್ರೀನಿವಾಸರಾವ, ಕಾಲೇಜಿನ ಆಡಳಿತ ಮಂಡಳಿಯ ಚೇರಮನ್‌ರಾದ ಶ್ರೀರಾಮ ಬೂಬ, ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಚೇತನ ದೋಖಾ, ವ್ಯವಸ್ಥಾಪನ ಮಂಡಳಿಯ ಎಲ್ಲಾ ಸದಸ್ಯರುಗಳು, ಪ್ರಾಚಾರ್ಯರು, ಉಪ-ಪ್ರಾಚರ್ಯರು,ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.