ತೊಗರಿಗೆ ಕ್ವಿಂಟಲ್ ಗೆ 7,000 ಬೆಲೆ ನಿಗದಿಪಡಿಸಿ

ಬೀದರ:ಡಿ.28: ಪ್ರತಿ ಕ್ವಿಂಟಲ್ ತೊಗರಿಗೆ ₹ 7 ಸಾವಿರ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕೇಂದ್ರ ಸರ್ಕಾರದ ₹ 6 ಸಾವಿರ ಕನಿಷ್ಠ ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರ ₹ 1 ಸಾವಿರ ಪ್ರೋತ್ಸಾಹ ಧನ ಕೊಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಖರೀದಿ ಕೇಂದ್ರಗಳಲ್ಲಿ ತೊಗರಿ ನೋಂದಣಿ ಅವಧಿ ಮಾರ್ಚ್‍ವರೆಗೆ ವಿಸ್ತರಿಸಬೇಕು. ಅತಿವೃಷ್ಟಿಯಿಂದ ತೊಗರಿ ಬೆಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.