ತೊಗರಿ ಖರೀದಿ ನೊಂದಣಿ ಆರಂಭ

ಕೆಂಭಾವಿ:ಡಿ.29:ಕೇಂದ್ರ ಸರಕಾರ ಘೋಷಿಸಿರುವ ಬೆಂಬಲ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ತೊಗರಿಯನ್ನು ಪ್ರತಿ ಕ್ವಿಂಟಾಲ್‍ಗೆ ರೂ.6000 ದಂತೆ ಖರೀದಿಸಲು ಕೆಂಭಾವಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ -1 ರಲ್ಲಿ ಭಾನುವಾರದಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.

ಪಟ್ಟಣದ ಸೇರಿದಂತೆ ಪತ್ತೇಪುರದ ರೈತರು ಪಿಕೆಪಿಎಸ್ ಮುಂದೆ ಸರತಿ ಸಾಲಿನಲ್ಲಿ ನಿಂತು ತಮ್ಮ ಹೆಸರು ನೋಂದಾಯಿಸುತ್ತಿದ್ದಾರೆ. ಸೋಮವಾರ ಸಾಯಂಕಾಲದ ವರೆಗೆ ಸುಮಾರು 406 ರೈತರು ನೋಂದಣಿ ಮಾಡಿಸಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಾಹಕ ಸತ್ಯರಾಜ ಮಾಳನೂರು ತಿಳಿಸಿದ್ದಾರೆ. ಪ್ರತಿಯೊಬ್ಬ ರೈತನಿಂದ ಗರಿಷ್ಠ 20 ಕ್ವಿಂಟಾಲ್ ತೊಗರಿ ಖರೀದಿಸಬಹುದಾಗಿದ್ದು ಈ ಭಾಗದ ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.