ತೋಟದ ಬೆಳೆ ಹಾನಿ-ಪರಿಹಾರಕ್ಕೆ ಒತ್ತಾಯ

ಕೋಲಾರ,ನ.೨೦:ಕೆಳದ ಕೆಲವು ದಿನದಿಂದ ಸತತವಾಗಿ ಸುರಿದ ಭಾರಿ ಮಳೆಯಿಂದ ನಗರ ಸೇರಿದಂತೆ ಗ್ರಾಮೀಣ ಭಾಗದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ತೋಟದ ಬೆಳೆಗಳು ನಾಶವಾಗಿದ್ದು ಇದರಿಂದ ಸಾಕಷ್ಟು ತೊಂದರೆಗಳು ಆಗಿದ್ದು ಕೂಡಲೇ ಸರಕಾರ ಮತ್ತು ಜಿಲ್ಲಾಡಳಿತ ಇವರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು.
ನಗರದ ಕೆಲವು ವಾರ್ಡ್ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ಕೆಲವು ಮನೆಗಳಿಗೂ ನೀರು ನುಗ್ಗಿದ್ದು ವಾಸ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಅಂತಹ ಕುಟುಂಬಗಳಿಗೆ ತಾತ್ಕಾಲಿಕವಾಗಿ ಬೇರೆ ಜಾಗದ ವ್ಯವಸ್ಥೆ ಮಾಡಬೇಕು ಮನೆಯೊಳಗೆ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು ರಾತ್ರಿ ಸಂದರ್ಭದಲ್ಲಿ ಮಲಗಲು ಕೂಡ ಸ್ಥಳವಿಲ್ಲದೇ ತೊಂದರೆಗಳನ್ನು ಅನುಭವಿಸಬೇಕಾಯಿತು. ಮನೆಯೊಳಗಿನ ನೀರನ್ನು ಹೊರಗಡೆ ಹಾಕಲು ಜನ ಹರಸಾಹಸ ಪಟ್ಟಿದ್ದು ಮಳೆ ಆವಾಂತರದಿಂದ ಜನರು ರಾತ್ರಿಯಿಡಿ ಜಾಗರಣೆ ಮಾಡುವಂತಾಗಿದೆ ಕೂಡಲೇ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಜಿಲ್ಲಾಡಳಿತ ಮತ್ತು ಸರಕಾರವನ್ನು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವುದು ಹಾನಿ ಸಂಭವಿಸುವುದು ಸಾಮಾನ್ಯವಾಗಿತ್ತು ಆದರೆ ಈ ಬಾರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದ್ದಾರೆ ಇದರಿಂದ ರೈತರಿಗೆ ಹಾಗೂ ಮನೆ ಕಳೆದುಕೊಳ್ಳುವರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಸಿಎಂಆರ್ ಶ್ರೀನಾಥ್ ಎಂದು ಒತ್ತಾಯಿಸಿದರು.