ತೋಟದ ಮನೆಗೆ ಅಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ವಿಜಯಪುರ: ಜೂ.12:ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಯಲಗೋಡ ಗ್ರಾಮದಲ್ಲಿ ನಡೆದಿದೆ.
ಮೊಸೀನಪಟೇಲಹುಸೇನಪಟೇಲ ಕಣಮೇಶ್ವರ ಅವರ ತೋಟದ ಮನೆಯಲ್ಲಿ ಈಘಟನೆ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸುಮಾರು 150ಕ್ಕೂ ಹೆಚ್ಚು ಹತ್ತಿಚೀಲಗಳು ಸುಟ್ಟು ಕರಕಲಾಗಿವೆ. ಮನೆಯಲ್ಲಿರುವ ದನ ಕರುಗಳು
ರಕ್ಷಿಸಲು ಹರಸಾಹಸ ಪಟ್ಟರು. ಯಾವುದೇ ಜೀವ ಹಾನಿಯಾಗಿಲ್ಲ.ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸಮಾಡಿದರು. ಕಲಕೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೈತಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಸಾಲ ಮಾಡಿ ಬೆಳೆದ
ಹತ್ತಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಈ ಕುರಿತುಸಂಭಂದಪಟ್ಟ ಅಧಿಕಾರಿಗಳು ತನಿಖೆ ನಡೆಸಿ ರೈತನಿಗೆ ಸುಕ್ತ ಪರಿಹಾರಒದಗಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.