ತೌಕ್ತೆ’ ಚಂಡಮಾರುತ ಪ್ರಧಾನಿ ಪರಿಶೀಲನೆ

ನವದೆಹಲಿ, ಮೇ ೧೫-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತೌಕ್ತೆ’ ಚಂಡಮಾರುತವನ್ನು ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಭೆ ನಡೆಸ
ಲಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದೇ ೧೭ರಂದು ತೀವ್ರ ಚಂಡಮಾರುತ ಎದುರಾಗುವ ಸಾಧ್ಯತೆ ಇದೆ. ಅದು ಒಂದು ದಿನದ ಬಳಿಕ ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿದೆ.
ಚಂಡಮಾರುತವು ಇಂದು ಬೆಳಿಗ್ಗೆಯಿಂದಲೇ ಪ್ರಬಲಗೊಳ್ಳಲಿದ್ದು, ನಾಳೆ ರಾತ್ರಿ ವೇಳೆಗೆ ಭಾರಿ ಮಳೆ ಸುರಿಸುತ್ತದೆ ಎಂದು ಐಎಂಡಿ ತಿಳಿಸಿದೆ.
ತೌಕ್ತೆ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್) ಈಗಾಗಲೇ ತನ್ನ ೫೩ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ ಎಂದು ಮೂಲಗಳು ತಿಳಿಸಿವೆ.