ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿಎಂ ಭೇಟಿ

ಕೆ.ಆರ್.ಪುರ, ಆ.೧೩-ಮಹದೇವಪುರ ಕ್ಷೇತ್ರದ ಕಣ್ಣೂರಿನ ಮಿಟಗಾನಹಳ್ಳಿ ಮತ್ತು ಮಂಡೂರಿನ ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಅಧಿಕಾರಿಗಳೊಂದಿಗೆ ಬೇಟಿ ನೀಡಿ ಪರಿವೀಕ್ಷಣೆ ಮಾಡಿದರು.
ಮಂಡೂರು ಸಮೀಪ ಕಸ ವಿಲೇವಾರಿ ಘಟಕದಲ್ಲಿ ಸುಮಾರು ೧೦ ವರ್ಷಗಳ ಹಿಂದೆ ಬಿ.ಬಿ.ಎಂ ಪಿ ವತಿಯಿಂದ ಬೃಹತ್ ಮಟ್ಟದಲ್ಲಿ ಸಂಗ್ರಹವಾದ ಕಸವನ್ನು ವೈಜ್ಞಾನಿಕವಾಗಿ ಬೇರ್ಪಡಿಸಿ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಂಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ವೈಜ್ಞಾನಿಕವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಣ್ಣೂರಿನ ಕ್ವಾರಿ ಕಸ ವಿಲೇವಾರಿ ಹಾಗೂ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರ ಮಾತನಾಡಿ ಕಣ್ಣೂರು ಸಮೀಪ ಅವೈಜ್ಞಾನಿಕವಾಗಿ ಕಲುಕ್ವಾರಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಈ ಭಾಗದಲ್ಲಿ ಕಲುಷಿತ ನೀರು ಸಂಗ್ರಹವಾಗುತ್ತಿದ್ದು, ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಸರಕ್ಕೆ ಹಾನಿಯಾಗುತ್ತಿದೆ.ನೊಣಗಳ ಹಾವಳಿ ಹೆಚ್ಚಾಗಿದೆ,
ಕಣ್ಣೂರಿಗೆ ಹೊಂದಿಕೊಂಡಿರುವ ಗ್ರಾಮಗಳ ನಿವಾಸಿಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡುವ ಭಾರೀ ವಾಹನಗಳ ಸಂಚಾರದಿಂದ ಇಲ್ಲಿನ ರಸ್ತೆಗಳು ಕೆಟ್ಟುಹೋಗಿದ್ದು, ಶೀಘ್ರದಲ್ಲಿ ಇಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಿಸಬೇಕೆಂದು ಡಿಸಿಎಂಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತರಾದ ಹರೀಶ್ .ಕಣ್ಣೂರು ಗ್ರಾ.ಪಂ ಅಧ್ಯಕ್ಷ ಅಶೋಕ್, ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿ ಟಿ.ನಾಗೇಶ್,ಕ್ಷೇತ್ರದ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ನಟರಾಜ್ ಬಿದರಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಬಿ.ಜಿ.ರಾಜೇಶ್,ಎಂಸಿಬಿ ರಾಜಣ್ಣ, ವರುಣ್,ಮುಖಂಡರಾದ ಕೆಂಪೇಗೌಡ ಹಾಜರಿದ್ದರು.