ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ರಾಜೀನಾಮೆ

ತ್ರಿಪುರಾ, ಮೇ.14- ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇವ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲು ಕೇವಲ ಒಂದು ವರ್ಷ ಬಾಕಿ ಇರುವಾಗಲೇ ಈ ಬೆಳವಣಿಗೆ ನಡೆದಿದೆ.
ತಮ್ಮ ರಾಜೀನಾಮೆ ಪತ್ರವನ್ನ ರಾಜ್ಯಪಾಲರಿಗೆ ರವಾನೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. ಹೈಕಮಾಂಡ್​ ಸೂಚನೆಯಂತೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿದ್ದ ಬಿಪ್ಲಬ್​ ಕುಮಾರ್ ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ತ್ರಿಪುರಾ ಬಿಜೆಪಿಯ ರಾಜ್ಯ ಘಟಕದಲ್ಲಿ ಒಳಜಗಳ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ತ್ರಿಪುರಾ ಉಪ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಇದೀಗ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.