ತ್ರಿಪುರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಕ್ಲೀನ್ ಸ್ವೀಪ್

ನವದೆಹಲಿ, ನ.28- ತ್ರಿಪುರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹುಪಾಲು ಸ್ಥಾನಗಳನ್ನು ಗೆದ್ದುಕೊಂಡಿದೆ..

222 ಸ್ಥಾನ 217 ಗಳಲ್ಲಿ ಗೆಲುವು ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರಲ್ಲಿ ಸಂಭ್ರಮ ಮನೆ ಮಾಡಿದೆ.

ನವಂಬರ್ 25 ರಂದು 13 ನಗರ ಸಭೆಗಳು,6 ನಗರ ಪಂಚಾಯಿತಿಗಳು, ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಬಿಜೆಪಿ ಚುನಾವಣೆಗೆ ಮುನ್ನವೇ 112 ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿತ್ತು.

ಇನ್ನುಳಿದ 222 ಕ್ಷೇತ್ರಗಳ ಪೈಕಿ 217 ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಇನ್ನುಳಿದ ಐದು ಕ್ಷೇತ್ರಗಳ ಪೈಕಿ ಸಿಪಿಎಂ ಮೂರು, ತೃಣಮೂಲ ಕಾಂಗ್ರೆಸ್ ಮತ್ತು ತ್ರಿಪುರ ಮೋರ್ಚಾ ಪಕ್ಷ ಕೆಲವೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಈಶಾನ್ಯ ರಾಜ್ಯ ತ್ರಿಪುರದಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಮೂಲ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

ತ್ರಿಪುರ ರಾಜ್ಯದ ನಗರಸ್ಥಳೀಯ ಸಂಸ್ಥೆಗಳ 334 ಕ್ಷೇತ್ರಗಳ ಪೈಕಿ 112 ಕ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿತ್ತು. ಈ ಮೂಲಕ ಆಗಲೇ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮುನ್ಸೂಚನೆ ನೀಡಿತ್ತು ಇಂದು ನಡೆದ ಮತಎಣಿಕೆಯಲ್ಲಿ ಬಹುಪಾಲು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.

ಅಗರ್ ತಲಾ ನಗರಪಾಲಿಕೆಯ ಎಲ್ಲಾ 51 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅದೇ ರೀತಿ ಹಲವು ನಗರಪಾಲಿಕೆ ಗಳಲ್ಲೂ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಿದೆ.