ತ್ರಿಷಿಕ ಜತೆಗೂಡಿ ಮೈದಾನ ಸ್ವಚ್ಛತೆಗಿಳಿದ ಯಧುವೀರ್

ಸಂಜೆವಾಣಿ ನ್ಯೂಸ್
ಮೈಸೂರು : ಏ.16:- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಒಡೆಯರ್ ಅವರೊಂದಿಗೆ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ರ್ಯಾಲಿಯ ಸ್ವಚ್ಛ ಪ್ರಯತ್ನ ನಡೆಸಿ ಗಮನ ಸೆಳೆದರು.
ಮುಂಜಾನೆಯೇ ಪಾಲಿಕೆ ಸಿಬ್ಬಂದಿ ಸ್ವಚ್ಛಗೊಳಿಸುತ್ತಿರುವುದನ್ನು ಗಮನಿಸಿದ ಯಧುವೀರ್ ಸ್ವಚ್ಛ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು. ಆದಷ್ಟು ಬೇಗ ಮೈದಾನವನ್ನು ಸ್ವಚ್ಚಗೊಳಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಪತ್ನಿ ತ್ರಿಶಿಕಾ ಅವರೊಂದಿಗೆ ಕೂಡಿ ಪ್ಲಾಸ್ಟಿಕ್ ಆರಿಸಿ ಸ್ವಚ್ಚಗೊಳಿಸಲು ಪ್ರಯತ್ನಿಸಿದರು. ಇದೇ ವೇಳೆ ಕೆಲವು ಸ್ವಯಂಸೇವಕರು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಬಳಿಕ ಮಾತನಾಡಿದ ಅವರು, `ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ.
ಮೋದಿಜಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ. ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ. ಸ್ವಚ್ಛತೆಗೆ ಮೈಸೂರು ನಗರಕ್ಕೆ ನನ್ನ ಮೊದಲ ಆದ್ಯತೆ ಎಂದು ಹೇಳಿದರು.
ಯಧುವೀರ್ ಅವರ ಈ ಸರಳ ನಡೆಯನ್ನು ಕಂಡ ವಾಯುವಿಹಾರಿಗಳು ಖುಷಿ ಪಟ್ಟರಲ್ಲದೆ ಅವರೊಟ್ಟಿಗೆ ಸೆಲ್ಫಿ ಕ್ಲಿಕಿಸಿಕೊಂಡರು. ಅಲ್ಲದೆ, ಇವರ ಸ್ವಚ್ಛತೆಯ ವಿಡಿಯೋ ಎಲ್ಲೆಡೆ ವೈರಲ್ ಆಯಿತು.