ತ್ರೈಮಾಸಿಕ ಕೆಡಿಪಿ ಸಭೆ ರದ್ದು

ಕಲಬುರಗಿ.ನ.09:ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ಆರ್. ನಿರಾಣಿ ಇವರ ಅಧ್ಯಕ್ಷತೆಯಲ್ಲಿ ಇದೇ ನವೆಂಬರ್ 12 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ.
ಮುಂದಿನ ಸಭೆಯ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.