ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಸ್ಥಳ ಮತ್ತೆ ಬದಲಾವಣೆ

ಕಲಬುರಗಿ: ಜ.5:ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರಗೇಶ ಆರ್. ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯು ಇದೇ ಜನವರಿ 7 ರಂದು ಬೆಳಿಗ್ಗೆ 10.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ ಭವನದ ಬದಲಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.

 ಕಾರಣಾಂತರಗಳಿಂದ ಸಭೆಯ ಸ್ಥಳವನ್ನು ಮತ್ತೆ ಬದಲಾವಣೆ ಮಾಡಲಾಗಿದ್ದು, ಈ ಸಭೆಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರಗತಿ ವರದಿ ಹಾಗೂ ಎಲ್ಲಾ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಇ.ಓ. ಡಾ.ಗಿರೀಶ್ ಡಿ. ಬದೋಲೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.