ತ್ರೈಮಾಸಿಕ ಕೆ.ಡಿ.ಪಿ. ಸಭೆ: ಸ್ಥಳ ಬದಲಾವಣೆ

ಕಲಬುರಗಿ: ಜ.03:ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರಗೇಶ ಆರ್. ನಿರಾಣಿ ಅವರ ಅಧ್ಯಕ್ಷತೆಯಲ್ಲಿ (ಕೆ.ಡಿ.ಪಿ.) ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಜನವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಏರ್ಪಡಿಸಲಾಗಿದೆ.
ಈ ಹಿಂದೆ ಸಭೆಯ ಸ್ಥಳವನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿತ್ತು. ಈ ಸಭೆಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರಗತಿ ವರದಿ ಹಾಗೂ ಎಲ್ಲಾ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.