ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ-ಸಚಿವ ಬೋಸರಾಜು

ಸಿರವಾರ,ಸೆ.೧೨- ಪಟ್ಟಣದಲ್ಲಿ ನಡೆಯುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಸೋಮವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕಾಮಗಾರಿ ಪ್ರಾರಂಭವಾಗಿ ವರ್ಷಕಳೆದರೂ ಪೂರ್ಣಹೊಳ್ಳದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೊಂಡು, ಕೂಡಲೇ ತ್ವರಿತಗತಿಯಲ್ಲಿ, ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.
ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆ ಎಂಡಿ ಚಂದ್ರಶೇಖರ, ಶಾಸಕ ಜಿ.ಹಂಪಯ್ಯನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದರು.