ತ.ನಾಡಿನಲ್ಲಿ ಭಾರೀ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

ಚೆನ್ನೈ,ನ.೧೮- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆಯಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಜಲಾವೃತವಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲಿಯೂ ಚೆನ್ನೈ ಸೇರಿದಂತೆ ತಮಿಳುನಾಡಿನ ಉತ್ತರ ಭಾಗದ ಜಿಲ್ಲೆಗಳಾದ ತಿರುವಲ್ಲೂರು, ಕಾಂಚೀಪುರಂ, ರಾಣಿಪೇಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಚೆನ್ನೈ ,ತಿರುವಳ್ಳೂರು ಕಾಂಚಿಪುರಂ ,ರಾಣಿಪೇಟೆ, ರಾಮನಾಥಪುರಂ, ಕಾಂಚೀಪುರಂ, ತೂತುಕುಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಚೆನ್ನೈನ ಹವಾಮಾನ ಇಲಾಖೆಯ ಉಪನಿರ್ದೇಶಕ ಡಾ. ಎಸ್ ಬಾಲಚಂದ್ರನ್ ತಿಳಿಸಿದ್ದಾರೆ.
ತಿರುವಣ್ಣಾಮಲೈ, ಕಲ್ಲಕುರೂಚಿ, ಸೇಲಂ, ಪೆರಂಬಲೂರು, ತಿರುಚನಾಪಲ್ಲಿ ,ಕರೂರು, ತಂಜಾವೂರು, ಥೇಣು, ಶಿವಗಂಗಾ, ವಿರುದುನಗರ್, ತೇನ್ ಕಾಶಿ, ಮದುರೈ, ದಿಂಡಿಗಲ್ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ತಮಿಳುನಾಡಿನಲ್ಲಿ ಕಳೆದ ಒಂದು ವಾರಕ್ಕೂ ಹೆಚ್ಚು ಸಮಯದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಾರಿ ಮಳೆಯಿಂದ ತಗ್ಗು ಪ್ರದೇಶಗಳು ಸೇರಿದಂತೆ ಇತರ ಪ್ರದೇಶಗಳ ಸಂಪೂರ್ಣ ಜಲಾವೃತವಾಗಿದ್ದು ಜನರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಅಪಾರ ಪ್ರಮಾಣದ ಆಸ್ತಿ ನಾಶ
ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಇದುವರೆಗೂ ೧೪ ಮಂದಿ ಮೃತಪಟ್ಟಿದ್ದು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಜಯಂತ್ ತಿಳಿಸಿದ್ದಾರೆ.
ಮುಂದಿನ ಹಲವು ದಿನಗಳ ಕಾಲ ಮಳೆಯಾಗಲಿದೆ ಜೊತೆಗೆ ಈಗಾಗಲೇ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ಜನರ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿತ್ತು ಪ್ರತಿನಿತ್ಯ ನೀರಿನ ಜೊತೆ ಬದುಕು ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದ್ದಾರೆ