ತ, ನಾಡು ಸೇರಿ ಹಲವೆಡೆ ಮಳೆ ನಿರೀಕ್ಷೆ

ಹೊಸದಿಲ್ಲಿ, ಡಿ.೨೦- ಇಂದು ಕೂಡ ದೇಶದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ . ಅದರಲ್ಲೂ ದೇಶದ ದಕ್ಷಿಣ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ .ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ತಮಿಳುನಾಡಿನ ೩೯ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಶನಿವಾರದವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಂದು ಪತನಂತಿಟ್ಟ, ಕೊಲ್ಲಂ ಮತ್ತು ತಿರುವನಂತಪುರಂನಲ್ಲಿ ಜಿಲ್ಲಾ ಮಟ್ಟದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತೆಲಂಗಾಣದಲ್ಲಿ ಮುಂದಿನ ೭ ದಿನಗಳ ಕಾಲ ಶುಷ್ಕ ವಾತಾವರಣವಿರುತ್ತದೆ. ಡಿಸೆಂಬರ್ ೨೪ ರಂದು ಉತ್ತರ-ದಕ್ಷಿಣ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಲಕ್ಷದ್ವೀಪದಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.
ಇದೆಲ್ಲದರ ನಡುವೆ ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳು ಹಿಮದಿಂದ ಆವೃತವಾಗಿದ್ದು, ಮುಂದಿನ ಐದು ದಿನಗಳ ಕಾಲ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಅತ್ಯಂತ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.
ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದ ಹಲವು ಭಾಗಗಳು ತೀವ್ರ ಚಳಿಯನ್ನು ಅನುಭವಿಸುತ್ತಿವೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತದಿಂದಾಗಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಚಳಿ ಹೆಚ್ಚಾಗಿದೆ.
ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ ಮತ್ತು ಪೂರ್ವ ಉತ್ತರ ಪ್ರದೇಶ, ಬಿಹಾರ, ಮೇಘಾಲಯ ಮತ್ತು ತ್ರಿಪುರದ ಕೆಲವು ಭಾಗಗಳಲ್ಲಿ ಭಾರೀ ಮತ್ತು ದಟ್ಟವಾದ ಮಂಜು ಉಂಟಾಗಬಹುದು. ಇನ್ನೆರಡು ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗಬಹುದು.