ತ.ರಾ.ಸುಬ್ಬರಾವ ಕನ್ನಡದ ದೊಡ್ಡ ಆಸ್ತಿ

ಕಲಬುರಗಿ:ಎ.10: ಕಥೆ, ಕಾದಂಬರಿ, ನಾಟಕ, ಸಂಪಾದನೆ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ತ.ರಾ.ಸುಬ್ಬರಾವ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಅಮೋಘವಾದ ಕೊಡುಗೆಯನ್ನು ನೀಡುವ ಮೂಲಕ ಕನ್ನಡದ ದೊಡ್ಡ ಆಸ್ತಿಯಾಗಿದ್ದಾರೆಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಶಿವನಗರದಲ್ಲಿರುವ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ತ.ರಾ.ಸುಬ್ಬರಾವ್‍ರ ಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.

  ತ.ರಾ.ಸು ಅವರು ದೊಡ್ಡ ಪ್ರಮಾಣದಲ್ಲಿ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದರು. ಪ್ರಗತಿಪರ ಚಿಂತಕರು ಆದ ತ.ರಾ.ಸು ಅವರು ಪತ್ರಿಕಾ ರಂಗದಲ್ಲಿಯೂ ತಮ್ಮ ಅಮೂಲ್ಯವಾದ ಸೇವೆಯನ್ನು ಸಲ್ಲಿಸಿದ್ದಾರೆ. ಸಾಹಿತಿಗಳಾಗಿ, ವಾಗ್ಮಿಗಳಾಗಿ ಜನಪ್ರೀಯರಾಗಿದ್ದ ಅವರು, 61 ಗ್ರಂಥಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಅಂತಹ ಮಹನೀಯರ ಬಗ್ಗೆ ವಿದ್ಯಾರ್ಥಿ ದೆಸೆಯಿಂದಲೇ ತಿಳಿದುಕೊಂಡು, ನಾಡು-ನುಡಿಗಾಗಿ ಸೇವೆ ಸಲ್ಲಿಸಬೇಕು.     ದೇಶದ ಸ್ವಾತಂತ್ರ್ಯ ಹೋರಾಟಗಾರರಾಗಿ ದೇಶದ ಹಳ್ಳಿ-ಹಳ್ಳಿಗೂ ಸಂಚರಿಸಿ ಸ್ವಾತಂತ್ರ್ಯ ಗೀತೆಗಳನ್ನು ಹಾಡುವ ಮೂಲಕ ಜನರಲ್ಲಿ ಸ್ವಾತಂತ್ರ್ಯ ಕಿಚ್ಚು ಹೆಚ್ಚಿಸಿದರು. ಅವರು ರಚಿಸಿದ 'ದುಗಾಸ್ತಮಾನ' ಕೃತಿಯು ಅನೇಕ ಮೌಲ್ಯಗಳನ್ನು ಹೊಂದಿದೆಯೆಂದರು.

 ಕಾರ್ಯಕ್ರಮದಲ್ಲಿ ಪ್ರಮುಖರಾದ ಸಾಗರ ಜಿ.ಬಂಗರಗಿ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ವಿಶ್ವನಾಥ ಶೇಗಜಿ ದಂಗಾಪುರ, ಅಮರ ಜಿ.ಬಂಗರಗಿ, ಎಸ್.ಎಸ್.ಪಾಟೀಲ ಬಡದಾಳ, ಗಣೇಶ ಗೌಳಿ, ಓಂಕಾರ ಗೌಳಿ ಸೇರಿದಂತೆ ಮತ್ತಿತರರಿದ್ದರು.