“ದಂಡಿ” ಗೆ ಚಾಲನೆ

ಹಿರಿಯ ಕಲಾವಿದರಾದ ತಾರಾ – ಸುಚೀಂದ್ರ ಪ್ರಸಾದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ದಂಡಿ  ಚಿತ್ರಕ್ಕೆ ವಿಶಾಲ್ ರಾಜ್ ಆಕ್ಷನ್ ಕಟ್ ಹೇಳುತ್ತಿದ್ದಸರೆ

ಸ್ವತಂತ್ರ ಪೂರ್ವದಲ್ಲಿ ನಡೆದ‌ ದಂಡಿ(ಉಪ್ಪಿನ) ಸತ್ಯಾಗ್ರಹದ ಬಗ್ಗೆ ಸಿನಿಮಾ ಮೂಡಿ‌ಬರುತ್ತಿದೆ.

ಡಾ||ರಾಜಶೇಖರ್ ಮಠಪತಿ‌ ಕಾದಂಬರಿ ಆಧರಿಸಿ ನಿರ್ಮಾಣವಾಗುತ್ತಿರುವ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೊನ್ನಾವರದ ಮೂಡ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಪದ್ಮಶ್ರೀ ಸುಕ್ರಿ ಗೌಡ ಚಿತ್ರೀಕರಣಕ್ಕೆ ಚಾಲನೆ ನೀಡಿ ಹಾರೈಸಿದರು

ಹೊನ್ನಾವರ, ಸಿದ್ದಾಪುರ, ಅಂಕೋಲ ಸುತ್ತಮುತ್ತ ಮೂವತ್ತು ದಿನಗಳ‌‌ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

ವೆಂಕಟೇಶ್  ಛಾಯಾಗ್ರಹಣವಿದೆ.

ಸಾಹಿತ್ಯ ಹಾಗೂ ಸಂಭಾಷಣೆಯನ್ನು ರಾಗಂ ಬರೆದಿದ್ದು, ರಾಮ್ ಕ್ರಿಶ್ ಸಂಗೀತ ನೀಡುತ್ತಿದ್ದಾರೆ.

ರಾಷ್ಟಪ್ರಶಸ್ತಿ ವಿಜೇತ ನಟಿ‌ ತಾರಾ ಹಾಗೂ ಸುಚೀಂದ್ರ ಪ್ರಸಾದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ನೂತನ‌ ಪ್ರತಿಭೆಗಳಾದ ಯುವಾನ್ ದೇವ್(ನಿರ್ಮಾಪಕರ ಪುತ್ರ) ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಾಮೋದರ್ ನಾಯ್ಡು ಕೂ‌ಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಉತ್ತರ ಕನ್ನಡ‌ದ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಚಿತ್ರ ಸಮರ್ಪಣೆಯಾಗಲಿದೆ.‌ ಸ್ವತಂತ್ರ ಬಂದು 75 ವರ್ಷ‌ಗಳಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಈ‌ ಚಿತ್ರವನ್ನು ತೆರೆಗೆ ತರಲು‌ ನಿರ್ದೇಶಕರು ಮುಂದಾಗಿದ್ದಾರೆ.