ದಂತದ ಕಾಳಜಿ ತುಂಬಾ ಅಗತ್ಯ

ಮುದಗಲ್,ಆ.೨೨-
ದಂತ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಇರಬೇಕು ಎಂದು ಮುದಗಲ್ಲ ಪುರಸಭೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಹೇಳಿದರು.
ಮುದಗಲ್ಲ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಗಳವಾರ ಪುರಸಭೆ ಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದಡಿ ಉಚಿತ ದಂತ ತಪಾಸಣೆ ಯನ್ನು ಪುರಸಭೆ ಯ ಪೌರ ಕಾರ್ಮಿಕರಿಗೆ ಹಾಗೂ ಪುರಸಭೆ ಸಿಬ್ಬಂದಿ ಗಳಿಗೆ, ಚಿಕಿತ್ಸಾ ಶಿಬಿರದಲ್ಲಿ ಚಿಕಿತ್ಸೆ ನೀಡಲಾಯಿತು.
ನಂತರ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರ ಮುದಗಲ್ಲನ ಸಮುದಾಯ ಆರೋಗ್ಯ ಕೇಂದ್ರ ದಂತ ವೈದ್ಯರಾದ ಗೀತಾಂಜಲಿ ಅವರು ಮಾತನಾಡಿದರು.
ಸ್ವಚ್ಛತೆ ಮರೆತರೆ ಸ್ವತಃ ರೋಗಗಳನ್ನು ಆಹ್ವಾನಿಸಿದಂತೆ. ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರೊಟ್ಟಿಯಂತಹ ಖನಿಜಯುಕ್ತ ಆಹಾರ ಸೇವಿಸಬೇಕು. ಇದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ ಎಂದರು.