ದಂತ ತಪಾಸಣಾ ಹಾಗೂ ಜಾಗೃತಿ ಶಿಬಿರ

(ಸಂಜೆವಾಣಿ ವಾರ್ತೆ)
ವಿಜಯಪುರ:ಜು.5: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಯದ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಕಲ್ಲೂರು ಹಲ್ಲಿನ ಆಸ್ಪತ್ರೆಯ ಸಹಯೋಗದಲ್ಲಿ ಮಂಗಳವಾರ ದಂತ ತಪಾಷಣಾ ಹಾಗೂ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರವನ್ನು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಹೆಚ್.ಎಂ.ಚಂದ್ರಶೇಖರ್ ಅವರು ಉದ್ಘಾಟಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ ಹಾಗೂ ಆರೋಗ್ಯದ ಬಗ್ಗೆ ಕಾಳಜಿಯನ್ನು ಹೊಂದಿರಬೇಕು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯವನ್ನು ಹೊಂದಿರಬಾರದು ಎಂದು ಸಲಹೆ ನೀಡಿದರು.
ನಮ್ಮ ಜೀವನದಲ್ಲಿ ದಂತದ ಆರೋಗ್ಯವು ಸಹ ಬಹುಮುಖ್ಯವಾದುದು ಎಂದು ತಿಳಿಸಿ, ವಿದ್ಯಾರ್ಥಿನಿಯರು ಹಾಗೂ ವಿಶ್ವವಿದ್ಯಾನಿಲಯದ ಸಿಬ್ಬಂದಿಗಳು ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ಮಾಡಿದರು.
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಪ್ರೊ.ರಾಜಕುಮಾರ ಮಾಲಿಪಾಟೀಲ ಮಾತನಾಡಿ ದೇಹದ ಸರ್ವತೋಮುಖ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ದಂತದ ಆರೋಗ್ಯವು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.
ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಈ ಶಿಬಿರದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.
ಕಲ್ಲೂರು ದಂತ ಆಸ್ಪತ್ರೆಯ ವೈದ್ಯರ ತಂಡವು ಉಚಿತ ದಂತ ತಪಾಸಣೆ ಶಿಬಿರವನ್ನು ನಡೆಸಿಕೊಟ್ಟಿತು. ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗಳು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಡಾ. ಜ್ಯೋತಿ ಉಪಾಧ್ಯೆ, ಶ್ರೀಮತಿ. ಅಶ್ವಿನಿ ಕೆ.ಎನ್, ಡಾ. ಪುಷ್ಪಾ ಹಿರೇಮಠ, ಡಾ. ಸ್ವಾತಿ ಅವಟಿ ಹಾಗೂ ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.