ದಕ್ಚಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಕೋವಿಡ್ ದೃಢ

ಬೆಂಗಳೂರು, ನ.27- ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಕೋವಿಡ್‌ ದೃಢಪಟ್ಟಿದ್ದು, ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ದಕ್ಷಿಣ ಆಫ್ರಿಕಾ ಸೇರಿದಂತೆ 10 ದೇಶಗಳ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ಈ ದೇಶಗಳಿಂದ ಕಳೆದ ಹತ್ತು ದಿನಗಳಲ್ಲಿ 584 ಜನ ಬಂದಿದ್ದಾರೆ.

ಈ ಪೈಕಿ ದಕ್ಷಿಣ ಆಫ್ರಿಕಾದಿಂದ 94 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕ್ವಾರಂಟೈನ್‌ ಮಾಡಿ ನಿಗಾವಹಿಸಲಾಗಿದೆ.

ಇಬ್ಬರಿಂದ ಸ್ಯಾಂಪಲ್ಸ್‌ ಪಡೆದು ರೂಪಾಂತರ ತಳಿ ಎಂಬುದನ್ನು ಖಾತರಿಪಡಿಸಿಕೊಳ್ಳಲು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಓಮಿಕ್ರಾನ್ ಕೊರೊನಾ ವೈರಸ್ ಕಾಣಿಸಿಕೊಂಡಿರು ವುದು ಇಡೀ ವಿಶ್ವವನ್ನೇ ಬೆಚ್ಚಿಬೀಳುವಂತೆ ಮಾಡಿದೆ.ಈ ಹಿನ್ನಲೆಯಲ್ಲಿ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ.