ದಕ್ಷಿಣ ಮತಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಕಲಬುರಗಿ,ಮೇ 5: ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ ಅವರು ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದ್ದೇನೆ .ಈ ಬಾರಿ ಚುನಾವಣೆಯಲ್ಲಿ ಆಯ್ಕೆ ಆದ ಮೇಲೆ ಕೈಗೊಳ್ಳುವ ಯೋಜನೆಗಳ ಬಗ್ಗೆ ಪ್ರಣಾಳಿಕೆಯಲ್ಲಿ ತಿಳಿಸಿದ್ದೇನೆ.ಕಲಬುರಗಿ ನಗರವನ್ನು ಮಾದರಿ ನಗರವನ್ನಾಗಿ ಮಾಡಬೇಕು ಅಂತ ಕನಸಿದೆ.ಈ ಹಿನ್ನೆಲೆಯಲ್ಲಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. ಈ ಬಾರಿ ಮತ್ತೆ ನನಗೆ ಅವಕಾಶ ಕೊಡಿ ಎಂದು ಅವರು ಮತದಾರರಿಗೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಎಂಎಲ್‍ಸಿ ಶಶೀಲ ನಮೋಶಿ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಕುಡಾ ಮಾಜಿ ಅಧ್ಯಕ್ಷ ದಯಾಘನ ಧಾರವಾಡಕರ್,ಮುಖಂಡರಾದ ಶಿವಯೋಗಿ ನಾಗನಳ್ಳಿ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.