ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ

ಕಲಬುರಗಿ:ಜ.10: ನಗರಕ್ಕೆ ಆಗಮಿಸಿದ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪಕುಮಾರ್ ಕೆ.ಸಿ. ಅವರು ಇಂದು ಕಲಬುರಗಿ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಗಾಣಗಾಪೂರದ ಗುರು ಶ್ರೀ ದತ್ತಾತ್ರೇಯ ದೇವಸ್ಥಾನ ಹಾಗೂ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ್ ಪಾಲಂ, ಜಿಲ್ಲಾ ಉಪಾಧ್ಯಕ್ಷರಾದ ಶಿವ ಅಷ್ಠಗಿ, ಸಚಿನ್ ರಾಠೋಡ, ಯುವ ಮೋರ್ಚಾ ಸದಸ್ಯರಾದ ಚನ್ನವೀರ ಹೀರೆಮಠ, ಹರೀಶ್ ರೆಡ್ಡಿ, ಸಂತೋಷ ಜನವಾಡ, ವಿಜು ಜಮಾದಾರ, ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.