
ರಾಯಚೂರು,ಏ.೦೫-ಹಸಿರು ಕ್ರಾಂತಿಯ ಮೂಲಕ ಬಡಜನರ ಹಸಿವು ನೀಗಿಸಿದ ಮುತ್ಸದ್ಧಿ ನಾಯಕ, ಸಮಾಜದ ಶೋಷಿತ ವರ್ಗಗಳ ಪರವಾದ ಧ್ವನಿಯಾಗಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ ರಾಮ್ ಸರ್ ಅವರ ಜನ್ಮದಿನದ ಅಂಗವಾಗಿ ಇಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಸಮಾಜದ ಮುಖಂಡರುಗಳು, ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.