ದಮನಿತ ಮಹಿಳೆಯರಿಗೆ ಸಿಗುವ ಸೌಲಭ್ಯ ಕುರಿತು ಜಾಗೃತಿ ಮೂಡಿಸಿ ಮುಖ್ಯವಾಹಿನಿಗೆ ತರಬೇಕು:ಸುಶಾಂತ ಎಮ್ ಚೌಗಲೆ

ಕಲಬುರಗಿ: ನ. 10: ದಮನಿತ ಮಹಿಳೆಯರಿಗೆ ಸಿಗುವ ಸೌಲಭ್ಯಗಳು ಹಾಗೂ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಅವರನ್ನು ಮುಖ್ಯವಾಹಿನಿಗೆ ತರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್ ಚೌಗಲೆ ಅವರು ಹೇಳಿದರು.
ಗುರುವಾರದಂದು ಹಳೆಯ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಜಿಲ್ಲಾ ಪೆÇೀಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆ ಕಲಬುರಗಿ ಇವರುಗಳು ಸಂಯುಕ್ತಾಶ್ರದಯಲ್ಲಿ ಜಿಲ್ಲಾ ಮಟ್ಟದ ದಮನಿತ ಮಹಿಳೆಯರ ಹಕ್ಕುಗಳ ಕುರಿತು ಒಂದು ದಿನದ ಕಾರ್ಯಾಗಾರ ಸಸಿಗೆ ನೀರು ಹಾಕುವ ಮೂಲಕ ಉದ್ಪಾಟಿಸಿ ಮಾತನಾಡಿದರು.
ದಮನಿತ ಮಹಿಳೆಯರಿಗಾಗಿ ಈಗಾಗಲೇ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಾವು ಕೆಲಸ ಮಾಡಬೇಕಾಗಿದೆ ದಮನಿತ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ರೇಷನ್ ಕಾರ್ಡ್, ಆಧಾರ ಕಾರ್ಡ್, ಉದ್ಯೋಗದಲ್ಲಿ ಅನೇಕ ಸೌಲಭ್ಯಗಳನ್ನು ನೀಡಬೇಕೆಂದರು. ದಮನಿತರ ಮಹಿಳೆಯರಿಗೆ ಪೆÇೀಲಿಸರು ತಮಗೆ ನೀಡಿದ ಆದೇಶದಂತೆ ಕಾನೂನು ಕ್ರಮಕೈಗೊಳ್ಳಬೇಕೆಂದರು.
ಜಿಲ್ಲಾ ಅಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕರಾದ ಮಲ್ಲಿಕಾರ್ಜುನ ಜಿ. ಬಿರಾದಾರ ಮಾತನಾಡಿ, ಹೆಚ್.ಐ.ವಿ. ಹೇಗೆ ಬರುತ್ತದೆ, ಹೇಗೆ ಬರುವುದಿಲ್ಲ, ನಿಯಂತ್ರಣ ಮತ್ತು ತಡೆಗಟ್ಟುವ ಕಾಯ್ದಿ 2017 ರಿಂದ ಏಡ್ಸ್ ಚಿಕ್ಸಿತೆ ಮತ್ತು ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.
ಅಸಮಾನತೆಗಳನ್ನು ಹೊಡೆದು ಹಾಕಿ, ಏಡ್ಸ್ ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಹರಡದಂತೆ ತಡೆಗಟ್ಟಿ ಹೆಚ್.ಐ.ವಿ/ಏಡ್ಸ್ ಬಗ್ಗೆ ಮುಕ್ತವಾಗಿ ಮಾತನಾಡಿ, ಅನುಮಾನ ಪರಿಹರಿಸಿಕೊಳ್ಳಿ ಮಾಹಿತಿ ಮತ್ತು ಸಲಹೆಗಾಗಿ ಉಚಿತ ರಾಷ್ಟ್ರೀಯ ಸಹಾಯವಾಣಿ 1097 ಕರೆ ಮಾಡಿ ಸಲಹೆ ಪಡೆಯಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಅವರು ಮಾತನಾಡಿ, ಏಡ್ಸ್ ಒಂದು ಭಯಾನಕ ರೋಗವಿದ್ದು, ಇದನ್ನು ತಡೆಗಟ್ಟು ಸರ್ಕಾರ ಈಗಾಗಲೇ ಕ್ರಮಕೈಗೊಂಡಿದ್ದು, ಏಡ್ಸ್ ಭಯಾದಿಂದ ತಪ್ಪಿಸಲು ಸರ್ಕಾರಿ ಅಸ್ಪತ್ರೆ, ಸಮುದಾಯ ಭವನಗಳಲ್ಲಿ ಹೆಚ್.ಐ.ವಿ. ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದರು.
ಕಲಬುರಗಿ ಮಾರ್ಗದರ್ಶಿ ಬ್ಯಾಂಕ್ ಪ್ರಮುಖ ಜಿಲ್ಲಾ ವ್ಯವಸ್ಥಾಪಕರಾಗಿ ಸದಾಶೀವ ವೀ ರಾತ್ರಿಕಲ್ ಅವರು ಮಾತನಾಡಿ, ದಮನಿತ ಮಹಿಳೆಯರಿಗಾಗಿ ಸರ್ಕಾರ ನೀಡುವ ಸೌಲಭ್ಯಗಳನ್ನು ಪ್ರಧಾನಿ ಮಂತ್ರಿ ರೋಜಗಾರ ಯೋಜನೆಯಡಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು.
ಕಲಬುರಗಿ ನಗರದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ ಅವರು ಮಾತನಾಡಿದರು. ಅದೇ ರೀತಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ ಯು. ಅವರು ಮಾತನಾಡಿದರು.
ವೇದಿಕೆ ಮೇಲೆ ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶರಣಮ್ಮ ಆರ್ ತಳವಾರ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟು ಘಟಕ ಡಾ ಚಂದ್ರಕಾಂತ ನರಬೋಳಿ, ಪೆÇೀಲಿಸ್ ಸಬ್ ಇನ್ಸ್‍ಪೆಕ್ಟರ್ ದಮನಿತ ಮಹಿಳೆಯರು ಮತ್ತು ಲತಾ ವಿ. ಅಲಬನೂರ ಸೇರಿದಂತೆ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.