ದರಏರಿಕೆ ಖಂಡಿಸಿ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ

ಕೋಲಾರ,ಏ.೨೩: ರಸಗೊಬ್ಬರ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆಗಳನ್ನು ಹೆಚ್ಚಿಸಿರುವ ಹಾಗೂ ಪ್ರತಿದಿನ ನೂತನ ರೂಪುರೇಷೆಗಳನ್ನು ತರುವ ಮೂಲಕ ರೈತರನ್ನು ಹಾಗೂ ಸಾರ್ವಜನಿಕರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಇದೇ ತಿಂಗಳು ದಿನಾಂಕ ೨೬-ರಂದು ಕೋಲಾರ ಕೇತ್ರದ ಸಂಸದ ಎಸ್. ಮುನಿಸ್ವಾಮಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಎಂದು ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ತಿಳಿಸಿದ್ದಾರೆ.
ಮುಳಬಾಗಿಲು ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಸಮಿತಿಯ ಪದಾಧಿಕಾರಿಗಳು ಸಭೆ ಸೇರಿ ಹೋರಾಟದ ಬಗ್ಗೆ ಚರ್ಚಿಸಲಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಾ ಇತ್ತ ಬದುಕಲು ಬಿಡದೆ ಸಾಯಲು ಬಿಡದೆ ದಿನೇದಿನೇ ಸಂಕಷ್ಟಕ್ಕೆ ದೂಡುತ್ತಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಆದ ನನ್ನ ನೇತೃತ್ವದಲ್ಲಿ ಕೋಲಾರ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೀರ್ಮಾನಿಸಿದರು.
ಸಭೆಯಲ್ಲಿ ಬಂಗಾರಿ ಮಂಜುನಾಥ್, ಎಲೇಶ್, ಕೂಟೇರಿ ನಾಗರಾಜ್, ವಡ್ಡಹಳ್ಳಿ ಮಂಜುನಾಥ್, ತಿಮ್ಮಾಪುರ ಶಿವು, ಐತಂಡಹಳ್ಳಿ ಅಂಬರೀಶ್, ಬೃಹಾನುದ್ದೀನ್, ಕೆಂಬೋಡಿ ರವಿ ಉಪಸ್ಥಿತರಿದ್ದರು.