ದರೂರು ದೇವಸ್ಥಾನ ಹುಂಡಿ ಏಣಿಕೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಅ.21: ತಾಲ್ಲೂಕಿನ ದರೂರು ಗ್ರಾಮದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆಯನ್ನು ಮಾಡಲಾಗಿದ್ದು 5ಲಕ್ಷದ 13ಸಾವಿರ ರೂಪಾಯಿ ಸಂಗ್ರಹವಾಗಿದೆ ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ತಿಳಿಸಿದರು.
ಗ್ರಾಮದ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯದಲ್ಲಿ ಕಂದಾಯ ನಿರೀಕ್ಷಕ ಹನುಮಂತಪ್ಪ, ದರೂರು, ಆಗಲೂರು, ಶಾನವಾಸಪುರ, ಕರೂರು, ತಾಳೂರು ಗ್ರಾಮಗಳ ಲೆಕ್ಕಾಧಿಕಾರಿಗಳು ಹಾಗೂ ಸಿರಿಗೇರಿ ಪೊಲೀಸ್ ಠಣಾಧಿಕಾರಿ ಮತ್ತು ಪ್ರಧಾನ ಅರ್ಚಕರು, ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಇದ್ದರು.