ಕಲಬುರಗಿ,ಮಾ.24-ಕಲಬುರಗಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ವಿಶಾಲ ದರ್ಗಿ ಮತ್ತು ಉಪ ಮೇಯರ್ ಆಗಿ ಶಿವಾನಂದ ಪಿಸ್ತಿ ಅವರು ನಗರದ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್) ದಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.
ಶ್ರೀಶೈಲಂ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಚೌದಾಪುರಿ ಹಿರೇಮಠದ ಡಾ.ರಾಜಶೇಖರ ಶಿವಾಚಾರ್ಯರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ ಅವರ ಸಮ್ಮುಖದಲ್ಲಿ ದರ್ಗಿ ಮತ್ತು ಪಿಸ್ತಿ ಅಧಿಕಾರ ಸ್ವೀಕರಿಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.